‘777 ಚಾರ್ಲಿ’ ಚಿತ್ರದ ಟ್ರೈಲರ್ ಬಿಡುಗಡೆ: ಸೂಪರ್ ಎಂದ್ರು ಅಭಿಮಾನಿಗಳು

ಸಿನಿಮಾ: ಸಿಂಪಲ್​ ಸ್ಟಾರ್​’ ರಕ್ಷಿತ್​ ಶೆಟ್ಟಿ (Rakshit Shetty) ಅಭಿನಯದ ಬಹು ನಿರೀಕ್ಷಿತ ‘777 ಚಾರ್ಲಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್​ಗೆ ಮೆಚ್ಚುಗೆ ವ್ಯಕ್ತವಾಗಿದೆ.

ರಕ್ಷಿತ್​ ಶೆಟ್ಟಿ ಅಭಿನಯದ ಈ ಚಿತ್ರದ ಮೇಲೆ ಬಹಳಷ್ಟು ನಿರೀಕ್ಷೆ ಇದೆ. ಶ್ವಾನ – ಮನುಷ್ಯನ‌ ಬಾಂಧವ್ಯದ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದ ಟ್ರೈಲರ್ ಅನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ಟ್ರೈಲರ್​ ನೋಡಿ 👇🏻

ಈ ಚಿತ್ರಕ್ಕೆ ಕಿರಣ್​ ರಾಜ್​ ನಿರ್ದೇಶನ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಜೊತೆ ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಠ್​ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ‘777 ಚಾರ್ಲಿ’ ಜೂನ್‌ 10ರಂದು ಬಿಡುಗಡೆಯಾಗಲಿದೆ.

Leave a Reply

Your email address will not be published. Required fields are marked *