ನವದೆಹಲಿ: ಭಾರತ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ಮನ್ ಹಾಗೂ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂತ್ ಕಾರು ಅಪಘಾತಕ್ಕೀಡಾಗಿದೆ. ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ರಿಷಭ್ ಪಂತ್ ಅವರ ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದೆ.
ರಿಷಭ್ ಪಂತ್ ಅವರು ದಿಲ್ಲಿಯಿಂದ ಉತ್ತರಾಖಂಡದ ತಮ್ಮ ಮರ್ಸಿಡಿಸ್ ಕಾರು ಚಲಾಯಿಸಿ ಕೊಂಡು ಮನೆಗೆ ಮರಳುತ್ತಿದ್ದರು. ಮುಂಜಾನೆ 5.30 ಯಲ್ಲಿ ಈ ಘಟನೆ ನಡೆದಿದೆ .
ಅಪಘಾತ ಸಂಭವಿಸಿದ ಸಂದರ್ಭದಲ್ಲಿ ರಿಷಭ್ ಪಂತ್ ಅವರು ಒಬ್ಬರೇ ಕಾರಿನಲ್ಲಿದ್ದರು ಎಂದು ಉತ್ತರಾಖಂಡ ಪೊಲೀಸ್ ಮಹಾ ನಿರ್ದೇಶಕ ಅಶೋಕ್ ಕುಮಾರ್ ತಿಳಿಸಿದ್ದಾರೆ. ರಿಷಬ್ ಅವರನ್ನು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಬಿಸಿಸಿಐ ಹಾಗೂ ಕ್ರಿಕೆಟ್ ಆಟಗಾರರು ಮತ್ತು ಕ್ರೀಡಾ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.