ವಿಧಾನಸೌಧದಲ್ಲಿ ಪಾಕಿಸ್ತಾನ್‌ ಪರ ಘೋಷಣೆ: ಮೂವರು ಅರೆಸ್ಟ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಎಫ್‌ಎಸ್‌ಎಲ್‌ ವರದಿಯನ್ನು ಆಧರಿಸಿ ಈ ಮೂವರ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಎಫ್‌ಎಸ್‌ಎಲ್‌ ವರದಿ, ಸ್ಥಳದ ಸಾಕ್ಷ್ಯಗಳು ಹಾಗೂ ಸಾಕ್ಷಿ ಹೇಳಿಕೆ ಆಧಾರದ ಮೇಲೆ ಮೂರು ಜನರನ್ನು ಬಂಧನ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಉಪ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಮೂಲದ ಇಲ್ತಾಜ್, ಬೆಂಗಳೂರು ಆರ್‌.ಟಿ. ನಗರದ ಮುನಾವರ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂಬವರನ್ನು ಬಂಧಿಸಲಾಗಿದೆ.

ಈ ಆರೋಪಿಗಳ ಆರೋಗ್ಯ ತಪಾಸಣೆ ಮಾಡಿಸಿ, ವಿಚಾರಣೆಗೆ ಒಳಪಡಿಸಿ ನಂತರ ನ್ಯಾಯಾಲಕ್ಕೆ ಹಾಜರುಪಡಿಸಲಾಗುತ್ತದೆ.

Leave a Reply

Your email address will not be published. Required fields are marked *