ಬೆಂಗಳೂರು: ದಿವಂಗತ ನಟ, ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಟಿ, ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರ ವಿವಾಹ ಇಂದು ಅದ್ದೂರಿಯಾಗಿ ನೆರವೇರಿತು. ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅದ್ದೂರಿ ವಿವಾಹ ಮಹೋತ್ಸವದಲ್ಲಿ ಮಾಡೆಲ್ ಅವಿವಾ ಬಿಡಪ್ಪ ಅವರ ಜೊತೆ ಅಭಿಷೇಕ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಒಕ್ಕಲಿಗ ಸಂಪ್ರದಾಯ ಪ್ರಕಾರ ಮದುವೆ ನೆರವೇರಿತು.
ಇನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಈಗ ಪತಿ-ಪತ್ನಿಯರಾಗಿದ್ದಾರೆ. ಅಂಬಿ ಪುತ್ರನ ಮದುವೆಗೆ ಸೆಲೆಬ್ರಿಟಿಗಳ ದಂಡು ಹರಿದುಬಂದಿದೆ. ಅಂಬರೀಷ್ ಕುಟುಂಬ ರಾಜಕೀಯ ಹಾಗೂ ಸಿನಿಮಾ ಎರಡೂ ಕ್ಷೇತ್ರಗಳಲ್ಲಿ ತೊಡಗಿಕೊಂಡಿದೆ. ಹೀಗಾಗಿ, ಅನೇಕ ಸೆಲೆಬ್ರಿಟಿಗಳು, ರಾಜಕೀಯ ನಾಯಕರು, ಗಣ್ಯರು ವಿವಾಹ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಸ್ಯಾಂಡಲ್ವುಡ್ ಮಾತ್ರವಲ್ಲ ಟಾಲಿವುಡ್, ಕಾಲಿವುಡ್ ಸಿನಿಮಾ ಇಂಡಸ್ಟ್ರಿಯಿಂದಲೂ ಅನೇಕ ಗಣ್ಯರು ಮದುವೆ ಆಗಮಿಸುತ್ತಿದ್ದಾರೆ.
ಅಭಿಷೇಕ್ ಮದುವೆಗೆ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್, ಸುಹಾಸಿನಿ ಮಣಿರತ್ನಂ, ಅನಿಲ್ ಕುಂಬ್ಳೆ, ನರೇಶ್-ಪವಿತ್ರಾ ಲೋಕೇಶ್, ರಾಕಿಂಗ್ ಸ್ಟಾರ್ ಯಶ್ ದಂಪತಿ, ಮೋಹನ್ ಬಾಬು, ದಿವಂಗತ ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ಸೇರಿದಂತೆ ಹಲವರು ಆಗಮಿಸಿದ್ದಾರೆ.