ಬೆಂಗಳೂರು: ಬೆಂಗಳೂರು ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ಪರಾರಿಯಾಗಲು ಯತ್ನಿಸಿದ್ದು ಪೊಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ತಮಿಳುನಾಡಿನಿಂದ ಆರೋಪಿಯನ್ನು ಬೆಂಗಳೂರಿಗೆ ಕರೆತರುವ ಸಂದರ್ಭದಲ್ಲಿ ಆರೋಪಿ ಮೂತ್ರ ವಿಸರ್ಜನೆಗೆ ಗಾಡಿ ನಿಲ್ಲಿಸುವಂತೆ ಮನವಿ ಮಾಡಿದ್ದಾನೆ. ಮನವಿ ಹಿನ್ನಲೆ ಕೆಂಗೇರಿಯ ಮೇಲ್ಸೇತುವೆ ಬಳಿ ವಾಹನ ನಿಲ್ಲಿಸುತ್ತಿದ್ದಂತೆ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಅಲ್ಲದೇ ಹಿಡಿಯಲು ಹೋದ ಕಾನ್ಸ್ಟೇಬಲ್ ಮಹಾದೇವಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿ ನಾಗೇಶ್ ಹಾಗೂ ಗಾಯಗೊಂಡಿರುವ ಕಾನ್ಸ್ಟೇಬಲ್ ಮಹದೇವಯ್ಯ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರೀತಿ ನಿರಾಕರಿಸಿದ್ದಕ್ಕಾಗಿ ಬೆಂಗಳೂರಿನಲ್ಲಿ ಏಪ್ರಿಲ್ 28ರಂದು ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಆರೋಪಿ ನಾಗೇಶ್’ನನ್ನ 16 ದಿನಗಳ ಬಳಿಕ ನಿನ್ನೆ ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದರು. ಸ್ವಾಮೀಜಿ ವೇಷದಲ್ಲಿದ್ದ ನಾಗೇಶ್(Nagesh) ನನ್ನ ಭಕ್ತರ ವೇಷದಲ್ಲಿ ಹೋಗಿ ಪೊಲೀಸರು ಬಂಧಿಸಿದ್ದರು.
