ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯ ನಗರದಲ್ಲಿ ಇಂದು ಮೆಘಾ ಡೈರಿ ಲೋಕಾರ್ಪಣೆಗೊಳಿಸಿದ್ದಾರೆ.
ಕಾರ್ಯಕ್ರಮದ ವೇಳೆ ಮಾತನಾಡಿದ ಅವರು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೆಘಾ ಹಾಲಿನ ಡೇರಿ ಮಾಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಠಾಧೀಶರಾದ ಪೂಜ್ಯ ಡಾಕ್ಟರ್ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತಿತರರು ಹಾಜರಿದ್ದರು.