ಚಾಮುಂಡೇಶ್ವರಿ ಅಮ್ಮನವರ ವರ್ದಂತಿ ಮಹೋತ್ಸವ

ಮೈಸೂರು: ಚಾಮುಂಡಿ ಬೆಟ್ಟದಲ್ಲಿಂದು ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ನೆರವೇರಿತು. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಇಂದು ಮೂರನೇ ಆಷಾಢ ಶುಕ್ರವಾರವಾಗಿದ್ದು, ಪ್ರತಿವರ್ಷದಂತೆ ಈ ವರ್ಷವೂ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ, ಪೂಜಾ ಕೈಂಕರ್ಯಗಳು ನಡೆಯಿತಾದರೂ ಇಂದೂ ಕೂಡ ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

ಇದನ್ನು ಓದಿ: ಟೋಕಿಯೊ ಒಲಿಂಪಿಕ್ಸ್‌: ಕ್ವಾರ್ಟರ್‌ ಫೈನಲ್ಸ್‌ ಪ್ರವೇಶಿಸಿದ ಪಿವಿ ಸಿಂಧೂ!

ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ಆಷಾಢ ಮಾಸದ ಕೃಷ್ಣಪಕ್ಷದ ಸಪ್ತಮಿಯಂದು ನಡೆಯಲಿದೆ . ಕೆಲವೇ ಗಣ್ಯರ ಸಮ್ಮುಖದಲ್ಲಿ ತಾಯಿ ಚಾಮುಂಡೇಶ್ವರಿಗೆ ವರ್ಧಂತಿ ಮಹೋತ್ಸವ ನಡೆಯಿತು.

ಇಂದು ಬೆಳಗಿನ ಜಾವ ನಾಲ್ಕು ಗಂಟೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಭ್ಯಂಜನ, ರುದ್ರಾಭಿಷೇಕ , ಪಂಚಾಮೃತ ಅಭಿಷೇಕ, ಹೂವಿನ ವಿಶೇಷ ಅಲಂಕಾರ ನಡೆಸಲಾಗಿದೆ .

ದೇವಾಲಯದ ಪ್ರಾಕಾರದಲ್ಲಿಯೇ ದರ್ಬಾರ್ ಉತ್ಸವ ನಡೆದಿದ್ದು , ಇದರಲ್ಲಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತವರ ಧರ್ಮಪತ್ನಿ ತ್ರಿಷಿಕಾಕುಮಾರಿ ಒಡೆಯರ್ ಜೊತೆ ಪಾಲ್ಗೊಂಡು ತಾಯಿಯ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಪೂಜೆ ನೆರವೇರಿತು.

Leave a Reply

Your email address will not be published. Required fields are marked *