“ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೂ ನಾಯಕರಿರಬೇಕು”

ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಪಕ್ಷದ ಕಚೇರಿಗೆ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಾಯಿತು. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ತಾವೆಲ್ಲರೂ ಸಹಕರಿಸಿದ್ದೀರಿ. ಜನರ ಹೃದಯವನ್ನು ಗೆದ್ದು ಅಧಿಕಾರಕ್ಕೆ ಬರಲು ಶ್ರಮಿಸಿದ್ದೀರಿ. ಕೊಟ್ಟ ಮಾತನ್ನು ನಾವೆಲ್ಲರೂ ಉಳಿಸಿಕೊಂಡಿದ್ದೇವೆ..

6 ವರ್ಷ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷನಾಗಿದ್ದರೂ, ಕೊನೆಗೆ ನಾನೊಬ್ಬ ಕಾರ್ಯಕರ್ತ ಎನ್ನುವುದು ಮರೆಯಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರು 8 ವರ್ಷ ಈ ರಾಜ್ಯಕ್ಕೆ ಉತ್ತಮ ಆಡಳಿತ ಕೊಟ್ಟು, ಪಕ್ಷ ಸಂಘಟನೆಗೆ ಶಕ್ತಿ ತುಂಬಿದ್ದಾರೆ. 2028ಕ್ಕೆ ಸಿದ್ದರಾಮಯ್ಯನವರ ಜೊತೆ ಸೇರಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇವೆ. ಕಾಂಗ್ರೆಸ್‌ ಸರ್ಕಾರ ಮತ್ತೆ ಬಂದೇ ಬರುವ ವಿಶ್ವಾಸವಿದೆ, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸೋಣ.

ರಾಹುಲ್‌ ಗಾಂಧಿಯವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಾದಯಾತ್ರೆ ಮಾಡಿ ಪಕ್ಷ ಸಂಘಟನೆ ಮಾಡಿದರು. ಇಡೀ ದೇಶಕ್ಕೆ ದೊಡ್ಡ ಸಂದೇಶ ಕೊಟ್ಟರು. ಇದೀಗ ರಾಜ್ಯದಲ್ಲಿ 10 ಸಾವಿರ ಭಾರತ್‌ ಜೋಡೋ ಸಂಘಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಕ್ರೀಡೆ, ಸಹೋದರತ್ವ ಹಾಗೂ ಸಂಘಟನೆಗಾಗಿ ಪ್ರತಿ ಭಾರತ್‌ ಜೋಡೋ ಸಂಘಕ್ಕೆ 10 ಲಕ್ಷ ರೂ. ಕೊಡಲು ತೀರ್ಮಾನಿಸಿದ್ದೇವೆ. ಪ್ರತಿ ಪಂಚಾಯಿತಿಯಿಂದ 200ರಿಂದ 250 ಸದಸ್ಯರನ್ನು ಮಾಡಲು ರೂಪುರೇಷೆ ಸಿದ್ಧಪಡಿಸಿದ್ದೇವೆ. ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೂ ಈ ದೇಶದಲ್ಲಿ ನಾಯಕತ್ವ ಇರಬೇಕು. ನಾಯಕರನ್ನು ತಯಾರು ಮಾಡಬೇಕು ಎನ್ನುವುದೇ ನಮ್ಮ ಉದ್ದೇಶವಾಗಿದೆ.

Leave a Reply

Your email address will not be published. Required fields are marked *