ಬೆಂಗಳೂರು: ಬೇಸಿಗೆ ಇನ್ನು ಮುಗಿದಿಲ್ಲ, ಮಳೆ ಇನ್ನೂ ಪ್ರಾರಂಭವಾಗಿಲ್ಲ ಬಹಳಷ್ಟು ಪ್ರದೇಶಗಳಲ್ಲಿ ನೀರಿನ ಅಭಾವ ಇದ್ದು ಕೂಡಲೇ ಇದನ್ನು ಸರಿದೂಗಿಸಿ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದರು.
ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಈ ಆದೇಶ ನೀಡಿದರು.
ಯಾವುದೇ ಜಿಲ್ಲೆಯಲ್ಲಿ ಕಲುಶಿತ ನೀರು ಸೇವನೆಯಿಂದ ಜೀವ ಹಾನಿಯಾದರೆ ಆಯಾ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಇದೇ ವೇಳೆ ಸಿಎಂ ಎಚ್ಚರಿಸಿದರು.
ಕೊಪ್ಪಳ ಜಿಲ್ಲೆಯಲ್ಲಿ ಕಲುಶಿತ ನೀರು ಸೇವಿಸಿ ಜೀವ ಹಾನಿಯಂತಹ ಪ್ರಕರಣಗಳು ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಲ್ಲಿನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಎಚ್ಚರಿಕೆ ನೀಡಿದರು.
ಸೇರಿಸಿ ಎಲ್ಲೆಲ್ಲಿ ಸಮಸ್ಯೆ ಉಂಟಾಯಿತು ಅಲ್ಲೆಲ್ಲ ತನಿಖೆ ನಡೆಸಬೇಕೆಂದು ಮುಖ್ಯ ಕಾರ್ಯದರ್ಶಿಗಳಿಗೆ ಸಿದ್ದರಾಮಯ್ಯ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ತಲೆದೊರಿರುವ ಕಡೆ ಟ್ಯಾಂಕ್‌ಗಳ ಮುಖಾಂತರ ನೀರು ಸರಬರಾಜು ಮಾಡಿ, ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಆಗಕೂಡದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಡಕ್ಕಾಗಿ ಹೇಳಿದರು.
ಸಭೆಯಲ್ಲಿ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯತ್ ಸಿಇಒ ಗಳು, ಜಿಲ್ಲಾಧಿಕಾರಿಗಳು, ಹಾಗೂ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ,ಬೈರತಿ ಸುರೇಶ್, ರಹೀಂ ಖಾನ್, ಅಧಿಕಾರಿಗಳಾದ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗೋವಿಂದರಾಜು, ನಜೀರ್ ಅಹ್ಮದ್ ಸೇದದಂತೆ ಅನೇಕ ಅಧಿಕಾರಿಗಳು ಪಾಲ್ಗೊಂಡಿದ್ದರು.