ಶಿವಮೊಗ್ಗ ನಗರ ಸಂಪೂರ್ಣ ನಿಯಂತ್ರಣದಲ್ಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಇಂತಹ ಕೃತ್ಯಗಳನ್ನು ಖಂಡಿತಾ ಹತ್ತಿಕ್ಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಶಿವಮೊಗ್ಗ ನಗರ ಸಂಪೂರ್ಣ ನಿಯಂತ್ರಣದಲ್ಲಿದೆ. ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡಿದ್ದರಿಂದ ನಗರದಲ್ಲಿ ಶಾಂತಿ ನೆಲೆಸಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ಮೇಲೂ ಕಲ್ಲು ಎಸೆದಿದ್ದು, ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಗಲಾಟೆಗೆ ಕಾರಣಕರ್ತರಾಗಿರುವ 43 ದುಷ್ಕರ್ಮಿಗಳನ್ನು ಬಂದಿಸಿದ್ದು ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *