ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಗದಗ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಗದಗ ನಗರದ ಎ.ಪಿ.ಎಂ.ಸಿ ಆವರಣದಲ್ಲಿನ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಆಯೋಜಿಸಲಾಗಿದ್ದ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರೋಣ ಶಾಸಕರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಜಿ.ಎಸ್.ಪಾಟೀಲ್, ಮಾಜಿ ಶಾಸಕ ಶ್ರೀ ಡಿ.ಆರ್.ಪಾಟೀಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮೀತಿ ಅಧ್ಯಕ್ಷ ಶ್ರೀ ಬಿ.ಬಿ.ಅಸೂಟಿ, ಕಾರ್ಮಿಕ ಇಲಾಖೆ ಆಯುಕ್ತರಾದ ಡಾ.ಎಚ್.ಎನ್. ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರಾದ ಡಾ.ಎಸ್.ಬಿ.ರವಿಕುಮಾರ್, ಜಿಲ್ಲಾಧಿಕಾರಿ ಶ್ರೀ ಸಿ.ಎನ್.ಶ್ರೀಧರ್, ಜಿ.ಪಂ ಸಿ.ಇ.ಓ ಭರತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ರೋಹನ್ ಜಗದೀಶ್ ಸೇರಿದಂತೆ ಇತರೆ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಪಕ್ಷದ ಮಹಿಳಾ ಕಾರ್ಯಕರ್ತರು ಆರತಿ ಬೆಳಗುವ ಮೂಲಕ ಸ್ವಾಗತಿಸಿದರು.