ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣವಾಗಿ ಸುಳ್ಳು ಮತ್ತು ಆಧಾರರಹಿತ ಎಂದು ಸ್ವತಃ ದೊಡ್ಡಣ್ಣ ಅವರೇ ಖಡಕ್ ಆಗಿ ಸ್ಪಷ್ಟಪಡಿಸಿದ್ದಾರೆ.
ಕಳೆದ ಕೆಲವು ಗಂಟೆಗಳಿಂದ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡಣ್ಣ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರುವ ಪೋಸ್ಟ್ಗಳು ಹರಿದಾಡುತ್ತಿದ್ದು, ಇದು ಅವರ ಅಭಿಮಾನಿ ವಲಯ ಹಾಗೂ ಚಿತ್ರರಂಗದಲ್ಲಿ ತೀವ್ರ ಆತಂಕ ಮೂಡಿಸಿತ್ತು. ನೂರಾರು ಫೋನ್ ಕರೆಗಳು ಬರಲಾರಂಭಿಸಿದ ಹಿನ್ನೆಲೆಯಲ್ಲಿ ನಟ ದೊಡ್ಡಣ್ಣ ಅವರು ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
’ನಾನು ಆರೋಗ್ಯವಾಗಿದ್ದೇನೆ’ ಎಂದ ದೊಡ್ಡಣ್ಣ.
ವದಂತಿಗಳಿಗೆ ತೆರೆ ಎಳೆದ ಅವರು, “ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ, ಮನೆಯಲ್ಲೇ ಆರಾಮಾಗಿದ್ದೇನೆ. ಯಾರೋ ಕೆಲವು ಭಗ್ನ ಸಂತೋಷಿಗಳು ಮತ್ತು ಕಿಡಿಗೇಡಿಗಳು ಇಂತಹ ವಿಕೃತ ಕೃತ್ಯ ಎಸಗಿದ್ದಾರೆ. ಇಂತಹ ಸುಳ್ಳು ಸುದ್ದಿಯನ್ನು ನಾನು ಸಹಿಸುವುದಿಲ್ಲ ಎಂದಿದ್ದಾರೆ.