ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಾ. ಸಿ. ಎನ್. ಮಂಜುನಾಥ್ ರವರ ನಿರಂತರ ಪ್ರಯತ್ನದ ಫಲವಾಗಿ, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (NH-275)ಯ ರಸ್ತೆ ಸುರಕ್ಷತೆಗಾಗಿ 712 ಕೋಟಿ ರೂ. ವೆಚ್ಚದಲ್ಲಿ ಪ್ರವೇಶ ಮತ್ತು ನಿರ್ಗಮನ (Entry & Exit) ನಿರ್ಮಾಣ ಸೇರಿದಂತೆ ಹೆಚ್ಚುವರಿ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿದ್ದು.
ಈ ಹಿನ್ನೆಲೆಯಲ್ಲಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ. ನಿತಿನ್ ಗಡ್ಕರಿ ಅವರ ಕೈಯಲ್ಲಿ ಶಂಕುಸ್ಥಾಪನೆ ನೆರವೇರಿದ್ದು, ರಸ್ತೆ ಸುರಕ್ಷತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಿದೆ. ಡಾ. ಸಿ. ಎನ್. ಮಂಜುನಾಥ್ ರವರು ಕೇಂದ್ರ ಸರ್ಕಾರದ ಸಹಕಾರಕ್ಕೆ ಮತ್ತು ನಿತಿನ್ ಗಡ್ಕರಿ ಅವರಿಗೆ ಮನಃಪೂರ್ವಕ ಧನ್ಯವಾದಗಳನ್ನು ತಿಳಿಸಿದರು.