ಪಂಚಾಯತ್ ವ್ಯವಸ್ಥೆ ಭದ್ರಪಡಿಸಬೇಕಾದರೆ ಜನತಂತ್ರ ವಿಕೇಂದ್ರೀಕರಣ ಆಗಬೇಕು: ಸಿದ್ದರಾಮಯ್ಯ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಮಹಾತ್ಮ ಗಾಂಧಿ ಅವರ ಕನಸಿನ ‘ಅಧಿಕಾರ ವಿಕೇಂದ್ರೀಕರಣ’ ಮತ್ತು ‘ಮಹಿಳಾ ಮೀಸಲಾತಿ’ಗೆ ಮುನ್ನುಡಿ ಬರೆದವರು ದಿ. ರಾಜೀವ್ ಗಾಂಧಿ ಅವರು. ಅಧಿಕಾರ ವಿಕೇಂದ್ರಕರಣದಿಂದ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಂಬಿದ್ದರು. ಹೀಗಾಗಿ ಗ್ರಾಮ ಸ್ವರಾಜ್ಯವನ್ನು ಪ್ರತಿಪಾದಿಸಿದರು.

ಗ್ರಾಮಗಳ ಅಭಿವೃದ್ದಿ ಇಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವುದು ಗಾಂಧೀಜಿಯವರ ನೀತಿಯಾಗಿತ್ತು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಮಹಾತ್ಮ ಗಾಂಧಿಯವರ ಆಶಯದಂತೆ ಅಧಿಕಾರ ವಿಕೇಂದ್ರೀಕರಣಕ್ಕೆ ಮುನ್ನುಡಿ ಬರೆದರು. ಜನತಂತ್ರದ ವಿಕೇಂದ್ರೀಕರಣಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತಂದವರು ರಾಜೀವ್ ಗಾಂಧಿಯವರು ಮತ್ತು ಇದನ್ನು ಜಾರಿ ಮಾಡಿದವರು ಮಾಜಿ ಪ್ರಧಾನಿ ನರಸಿಂಹರಾವ್ ಅವರು.

ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಗಳಲ್ಲಿ ಶೇ.50 ಮೀಸಲಾತಿ ಜಾರಿಗೆ ಬರಲು ಕಾರಣ ಆದವರು ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ.

ಈಗ ಕೇಂದ್ರ ಸರ್ಕಾರ ಜಾರಿ ಮಾಡಿದ್ದೀವಿ ಎಂದು ಹೇಳಿಕೊಳ್ಳುತ್ತಿರುವ ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿ ಬರೆದದ್ದು ಕಾಂಗ್ರೆಸ್ ಸರ್ಕಾರ. ಈಗ ಹಿಂದುಳಿದ ವರ್ಗಗಳ ಮಹಿಳೆಯರಿಗೂ ಮೀಸಲಾತಿ ಕಲ್ಪಿಸಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ.

ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಮಹಾತ್ಮಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಅನುಕೂಲ ಆಗುತ್ತದೆ.

ಖಾದಿ-ಗ್ರಾಮೋದ್ಯೋಗ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಗ್ರಾಮೋದ್ಯೋಗ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು.

Leave a Reply

Your email address will not be published. Required fields are marked *