ಬೆಂಗಳೂರು: ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ (Varun Singh) ಅವರು ಕೊನೆಯುಸಿರೆಳೆದಿದ್ದಾರೆ.
ಕ್ಯಾಪ್ಟನ್ ವರುಣ್ ಸಿಂಗ್ (Varun Singh) ಅವರ ದೇಹ ಶೇಕಡಾ 80ರಷ್ಟು ಸುಟ್ಟುಹೋಗಿತ್ತು. ಅವರಿಗೆ ಬೆಂಗಳೂರಿನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಎಂದು ವಾಯುಸೇನೆ ತಿಳಿಸಿದೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಂಐ-17ವಿ5 ಅಪಘಾತದಲ್ಲಿ ಸೇನಾ ಪಡೆಗಳ ಮುಖ್ಯಸ್ಥ (CDS) ಬಿಪಿನ್ ರಾವತ್ ಸೇರಿದಂತೆ 13 ಮಂದಿ ಅಸುನೀಗಿದ್ದರು. ದುರಂತದಲ್ಲಿ ಒಟ್ಟು 14 ಜನರ ಪೈಕಿ ವರುಣ್ ಸಿಂಗ್ ಮಾತ್ರ ಜೀವಂತವಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಪ್ರಧಾನಿ ಮೋದಿ ಸಂತಾಪ:
ಕ್ಯಾಪ್ಟನ್ ವರುಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿದ ಗಣ್ಯರು ಸಂತಾಪ ಸೂಚಿಸಿದ್ದಾರೆ. ವರುಣ್ ಸಿಂಗ್ ಸೇವೆಯನ್ನು ಈ ದೇಶ ಎಂದಿಗೂ ಮರೆಯುವುದಿಲ್ಲ ಅಂತ ಮೋದಿ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.