ಟೋಕಿಯೊ: ಟೋಕಿಯೊ ಒಲಿಂಪಿಕ್ಸ್’ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧೂ ಗೆಲುವಿನ ಓಟ ಮುಂದುವರೆಸಿದ್ದು ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.
ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಅಂತಿಮ ಎಂಟರ ಘಟ್ಟಕ್ಕೆ ಪ್ರವೇಶ ಮಾಡುವ ಮೂಲಕ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ವಿಶ್ವಾಸವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿದ್ದಾರೆ.
ಸಾಕಷ್ಟು ರೋಚಕತೆ ಸೃಷ್ಟಿಸಿದ್ದ ಈ ಪಂದ್ಯದಲ್ಲಿ ಡೆನ್ಮಾರ್ಕ್ನ ಮಿಯಾ ಬ್ಲಿಚ್ಫೆಲ್ಡ್ಟ್ ವಿರುದ್ಧ 21-15, 21-13 ಅಂಕಗಳ ಅಂತರದಲ್ಲಿ ಸಿಂಧೂ ಅವರು ಮೇಲುಗೈ ಸಾಧಿಸಿದರು. ಸುಮಾರು 40 ನಿಮಿಷಗಳ ಕಾಲ ಈ ಪಂದ್ಯ ನಡೆಯಿತು.