ಪ್ರೀಯಾಂಕ್ ಖರ್ಗೆಯನ್ನು 15 ದಿನ ನಿಮ್ಹಾನ್ಸ್‌ಗೆ ಸೇರಿಸಬೇಕು: ಜನಾರ್ದನ ರೆಡ್ಡಿ

ಆನೆಗೊಂದಿ: ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

“ಪ್ರಿಯಾಂಕ್ ಖರ್ಗೆಯನ್ನು 15 ದಿನ ಬಿಟ್ಟು ನಿಮ್ಹಾನ್ಸ್‌ಗೆ ಸೇರಿಸಬೇಕು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಅವರು, ರಾಜ್ಯ ಸರ್ಕಾರದ ಕಾರ್ಯವೈಖರಿ ಹಾಗೂ ಸಚಿವರ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಿದರು.

ರೆಡ್ಡಿ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದರ ಕುರಿತು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರಿಂದ ಪ್ರತಿಕ್ರಿಯೆಗಳು ವ್ಯಕ್ತವಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *