ಪ್ರಧಾನಿ ಮೋದಿಯವರನ್ನ ಭೇಟಿಯಾದ ಸಿಎಂ ಬಸವರಾಜ್ ಬೊಮ್ಮಾಯಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಪ್ರಧಾನಿ ಮೋದಿಯವರನ್ನ ಭೇಟಿ ಮಾಡಿ, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚಿಸಿದರು.

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಬಸವರಾಜ ಬೊಮ್ಮಾಯಿ ಮೊದಲ ಸಲ ದೆಹಲಿಗೆ ಭೇಟಿ ನೀಡಿ, ಪ್ರಧಾನಿ ಮೋದಿಯವರನ್ನ ಭೇಟಿ ಮಾಡಿದ್ದಾರೆ. ಸ್ವಚ್ಛ, ಸುಭದ್ರ ಆಡಳಿತಕ್ಕೆ ಪ್ರಧಾನಿ ಮೋದಿ ಸೂಚಿಸಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಅಂತ ಸಿಎಂ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಕುರಿತು ಚಿತ್ರದೊಂದಿಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ‘ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಭೇಟಿಯಾದೆ. ಕರ್ನಾಟಕದ ಪ್ರಗತಿಯ ಹಾದಿಯಲ್ಲಿ ಹೊಸ ಪಯಣವನ್ನು ಆರಂಭಿಸುತ್ತಿರುವ ಅವರಿಗೆ ಶುಭ ಹಾರೈಸಿದ್ದೇನೆ. ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ ನೀಡುವ ಭರವಸೆ ಕೊಟ್ಟಿದ್ದೇನೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *