ಬೆಂಗಳೂರು: ಕರ್ನಾಟಕದ ಹೆಮ್ಮೆ ಪುತ್ರ, ಭಾರತದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಬುಧವಾರ 90ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೆಚ್’ಡಿಡಿ ಹುಟ್ಟುಹಬ್ಬ ಹಿನ್ನಲೆ ಗಣ್ಯಾತಿ ಗಣ್ಯರು ಶುಭಾಶಯ ಕೋರಿದ್ದಾರೆ.
ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಹ ಶುಭಾಶಯ ಕೋರಿದ್ದಾರೆ. ‘ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಶ್ರೀ ಹೆಚ್.ಡಿ ದೇವೇಗೌಡ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಸರ್ವಶಕ್ತನು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ದಯಪಾಲಿಸಲಿ’ ಅಂತ ಟ್ವೀಟ್ ಮಾಡಿ ಶುಭಾಶಯ ಕೋರಿದ್ದಾರೆ.
ಹೆಚ್.ಡಿ ದೇವೇಗೌಡರು ಮೇ 18 1933ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಪೂರ್ಣ ಹೆಸರು ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ. ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಪದವೀಧರರಾಗಿರುವ ಇವರು, ದೇವೇಗೌಡರು ಮೇ 30ರ 1997ರಂದು ಭಾರತದ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.