ಬೆಂಗಳೂರು: ಖ್ಯಾತ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಸೋಲದೇವನ ಹಳ್ಳಿಯ ಅವರ ತೋಟದಲ್ಲಿ ನೆರವೇರಿತು.
ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಹಿಂದೂ ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನೆರವೇರಿಸಿದರು. ಚಿತ್ರರಂಗದ ಎಲ್ಲಾ ಗಣ್ಯರು,ರಾಜಕೀಯ ನಾಯಕರು ನೆಲಮಂಗಲ, ಸೋಲದೇವನ ಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಜನರು ಅಂತ್ಯಸಂಸ್ಕಾರದ ವೇಳೆ ಹಾಜರಿದ್ದರು.
ಪೊಲೀಸ್ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡರು. ಅಂತ್ಯಕ್ರಿಯೆಗೂ ಮೊದಲು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಅವರ ಪಾರ್ಥಿವ ಶರೀರವನ್ನು ಇಡಲಾಗಿತ್ತು.ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಅಭಿಮಾನಿಗಳು ಅಂತಿಮ ದರ್ಶನ ಪಡೆದರು.